Belagavi News In Kannada | News Belgaum

ಅಂಗಡಿ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಅಂಗಡಿ ಪ.ಪೂ. ಮಹಾವಿದ್ಯಾಲಯ, ಬೆಳಗಾವಿ

 

ಬೆಳಗಾವಿ : ಸ್ಥಳೀಯ ಅಂಗಡಿ ಪ.ಪೂ. ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ನೂತನವಾಗಿ ಪ್ರವೇಶ ಪಡೆದಿರುವ ಪ್ರಥಮ ವರ್ಷದ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಇತ್ತೀಚೆಗೆ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯರಾದ ಪ್ರೊ. ಸಂಗೀತಾ ದೇಸಾಯಿ ಅವರು ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಸ್ವಾಗತಿಸಿದರು..

ಸಮಾರಂಭವನ್ನು ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಗೌರವಾನ್ವಿತ ಸಂಸದರು ಹಾಗೂ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಮಂಗಲ ಅಂಗಡಿ ಉದ್ಘಾಟನಾ ಭಾಷಣ ಮಾಡಿದರು.

ತಮ್ಮ ಭಾಷಣದಲ್ಲಿ ಅವರು ಎಲ್ಲ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು ಮತ್ತು ಅವರ ಕನಸುಗಳನ್ನು ಸಾಕಾರಗೊಳಿಸಲು ಸಂಸ್ಥೆಯು ಒದಗಿಸಿದ ಅಗಾಧ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆಯನ್ನು ನೀಡಿದರು..

 

ವಿದ್ಯಾರ್ಥಿಗಳು ಒಬ್ಬೊಬ್ಬರಾಗಿ ತಮ್ಮನ್ನು ಪರಿಚಯಿಸಿಕೊಂಡರು. ಎಲ್ಲ ಪ್ರಮುಖ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ವಿದ್ಯಾರ್ಥಿಗಳಿಗೆ ಅವರ ಕೋರ್ಸ ವಿವರಗಳು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಕು. ಖುಷಿ ಮತ್ತು ತಂಡದವರಿಂದ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕು.ರುತುಜಾ ನಿರೂಪಿಸಿದರು. ಕು. ಹರ್ಷಾ ವಂದಿಸಿದರು.