ಇಲಾಖೆ ಸಚಿವರಿಂದ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಬೆಳಗಾವಿ ; ಇಲಾಖೆ ಸಚಿವರಿಂದ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
ಮಾಡಿರುವ ಕುರಿತು.
, 2022-23ನೇ ಸಾಲಿನ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸಚಿವ ಲಕ್ಷ್ಮೀ ಆರ್. ಹೆಬ್ಬಾಳಕರ ರವರು ಇಂದು ದಿನಾಂಕ: 18-06-2023 ರಂದು ಬೆಳಿಗ್ಗೆ 11-00 ಗಂಟೆಗೆ ಬೆಳಗಾವಿಯ ತಮ್ಮ ಗೃಹ ಕಛೇರಿಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ರವರು ಮತ್ತು ನಾಗರಾಜು ಆರ್. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಹಾಗೂ ನಾಮದೇವ ಬಿಲ್ಕರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಬೆಳಗಾವಿ ಇವರು ಸದರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.