ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಸಿಬ್ಬಂದಿಯೊಬ್ಬರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ : ಹುಬ್ಬಳ್ಳಿಯ ಪಂಚಾಕ್ಷರಿ ನಗರದ ಮನೆಯೊಂದರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಸಿಬ್ಬಂದಿಯೊಬ್ಬರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸವಿತಾ ನಾಯ್ಕರ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಕೆಎಸ್ಆರ್‌ಪಿಯಲ್ಲಿ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುವ ಸಂಗಮೇಶ ನಾಯ್ಕರ ಅವರ ಪತ್ನಿ ಎಂದು ತಿಳಿದುಬಂದಿದೆ.ಮನೆಯವರು ಎಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾತ್ರಿ ಮನೆ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ನವನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಸವಿತಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.