ಎರಡು ಬಸ್ ಮುಖಾಮುಖಿ ಡಿಕ್ಕಿ: ಏಳು ಜನ ಸಾವು ..

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ..
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ..
ಅಪಘಾತಕ್ಕೆ ನಿಖರವಾದ ಕಾರಣ ಗೊತ್ತಾಗಿಲ್ಲ. ಗಾಯಾಳುಗಳೊಂದಿಗೆ ಮಾತನಾಡಿದ ಬಳಿಕವಷ್ಟೇ ಮಾಹಿತಿ ತಿಳಿಯಲಿದೆ ಎಂದು ಕಡಲೂರು ಪೊಲೀಸ್ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ರಾಜ್ಯ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ..