Belagavi News In Kannada | News Belgaum

9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.20 ರಂದು

 

ಬೆಳಗಾವಿ, ಜೂ.19  : ಜಿಲ್ಲಾಆಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜೂ.20) ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ.

ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಲ. ಜಾರಕಿಹೊಳಿ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಲೋಕಸಭೆ ಸಂಸದರಾದ ಅನಂತಕುಮಾರ ಹೆಗಡೆ, ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭೆ ಸಂಸದರಾದ ಈರಣ್ಣ ಕಡಾಡಿ, ಲೋಕಸಭಾ ಸಂಸದೆಯಾದ ಮಂಗಳಾ ಸುರೇಶ ಅಂಗಡಿ ಗೌವಾನ್ವಿತ ತಿಥಿಗಳಾಗಿ ಆಗಮಿಸಲಿದ್ದಾರೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಜಿಲ್ಲಾ ಅಧಿಕಾರಿಗಳಾದ ನಿತೇಶ್ ಕೆ. ಪಾಟೀಲ, ಬೆಳಗಾವಿ ನಗರ ಪೆÇಲೀಸ್ ಆಯುಕ್ತಾರಾದ ಡಾ. ಎಂ. ಬಿ ಬೋರಲಿಂಗಯ್ಯ, ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕರಾದ ಎನ್. ಸತೀಶಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಸಂಜೀವ .ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಹೇಶ್ ಕೋಣಿ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ಯ ಇಲಾಖೆ ಅಧಿಕಾರಿಗಳಾದ ಡಾ. ಶ್ರೀಕಾಂತ್ ಬೀ.ಸುಣಧೋಳಿ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.