ಪಿಯು ವಿದ್ಯಾರ್ಥಿನಿ ದುರಂತ ಸಾವು: ತನಿಖೆ ಚುರುಕು

ದಾವಣಗೆರೆ: ಕಾಲೇಜಿನ ಕಾಂಪೌಂಡ್ನಿಂದ ಜಾರಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಹರಿಹರದ ಕುರುಬರಹಳ್ಳಿಯ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ನಡೆದಿದೆ..
ಸಿನಿಕ್ಷಾ (16) ಮೃತಪಟ್ಟ ವಿದ್ಯಾರ್ಥಿನಿ. ಕಾಂಪೌಂಡ್ನಿಂದ ಬಿದ್ದು ಸಿನಿಕ್ಷಾ ತೀವ್ರ ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ..
ಮೃತ ಸಿನಿಕ್ಷಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಶಶಿಕಾಂತ್ ಎಂಬುವರ ಪುತ್ರಿ. ಮಾನ್ಯತಾ ವಸತಿ ಕಾಲೇಜಿನಲ್ಲಿ ಸೈನ್ಸ್ ವಿಭಾಗದ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿದ್ದಳು. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಾಲೇಜಿಗೆ ಹಾಜರಾಗಿದ್ದಳು..
ಇದೀಗ ಅಕಾಲಿಕವಾಗಿ ಮೃತಪಟ್ಟಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.