ಫಿಲ್ಲರ್ ಕುಸಿತ: ತಾಯಿ, ಮಗ ಸಾವು ; ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಜ 10, ರಂದು ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಾರದದಲ್ಲಿ ನಿರ್ಮಾಣ ಹಂತದ ಮೆಟ್ರೋ ಫಿಲ್ಲರ್ ಕುಸಿದು ಬಿದ್ದು, ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದರು..
ಈ ಘಟನೆ ಸಂಬಂಧ ಐದು ತಿಂಗಳ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಸಂಬಂಧ ಗೋವಿಂದಪುರ ಠಾಣೆಯ ಪೊಲೀಸರು ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಸುಮಾರು 1100 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ..
ಪೋಲೀಸರು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ ಮೆಟ್ರೋ ಕಾಮಗಾರಿ ಕೈಗೊಂಡಿದ್ದಂತ ಕನ್ ಸ್ಟ್ರಕ್ಷನ್ ಇಂಜಿನಿಯರ್, ಬಿಎಂಆರ್ ಸಿಎಲ್ ಇಂಜಿನಿಯರ್ಸ್ ಸೇರಿದಂತೆ 11 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಲಾಗಿದೆ..
ಇದಲ್ಲದೇ ತಜ್ಞರ ವರದಿ, ಪೊಲೀಸ್ ತನಿಖೆ, ಎಫ್ ಎಸ್ ಎಲ್ ವರದಿ, ಐಐಟಿ ವರದಿಯ ಅಂಶಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಚಾರ್ಜ್ ಶೀಟ್ ನಲ್ಲಿ ಪಿಲ್ಲರ್ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಬಗ್ಗೆಯೂ ಉಲ್ಲೇಖಿಸಲಾಗಿದೆ..