ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ: ರಾಷ್ಟ್ರ ಪ್ರಶಸ್ತಿ ಅರ್ಜಿ ಆಹ್ವಾನ

ಬೆಳಗಾವಿ, ಜೂ.23 ಭಾರತ ಸರ್ಕಾರ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ 2023 ನೇ ಸಾಲಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜೂನ್.16 2023 ರಿಂದ ಜುಲೈ 31 2023 ರವರೆಗೆ ಅರ್ಜಿಗಳನ್ನು ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ /ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಗಳಲ್ಲಿ ವೆಬ್ ಸೈಟ್ www.disabilityaffairs.gov.in ಅಥವಾ www.awards.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ವೆಬ್ ಸೈಟ್ www.awards.gov.in ಅನ್ನು ಹಾಗೂ ಈ ಕಛೇರಿಯ ದೂರವಾಣಿ ಸಂಖ್ಯೆ:0831-2476096 ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./
ಕುಸುಬೆ ಉತ್ಪನ್ನ: ಬೇಲೆ ನಿಗದಿ, ಖರೀದಿ ಕೇಂದ್ರ ಪ್ರಾರಂಭ
ಬೆಳಗಾವಿ, ಜೂ.23 : 2022-23 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ರೂ. 5,650/-ರಂತೆ ಮೇ.16 2023 ರಿಂದ ಮುಂದಿನ 45 ದಿನಗಳವರೆಗೆ ನೋಂದಣಿ ಜೊತೆಗೆ ಖರೀದಿ ಅವಧಿಯನ್ನು ಮೇ.16 2023 ರಿಂದ 90 ದಿನಗಳವರೆಗೆ ನಿಗದಿಪಡಿಸಿದ್ದು, ಬೆಳಗಾವಿ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಜಿಲ್ಲೆಯ ಬೈಲಹೊಂಗಲ ಮತ್ತು ಸವದತ್ತಿ ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ.
ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ, (ಏಔಈ), ಮಹಾಂತೇಶ ನಗರ, ಬೆಳಗಾವಿ, ಕಂಚನಾಳೆ, ಇವರ ದೂರವಾಣಿ ಸಂಖ್ಯೆ: 9900553048 ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.