Belagavi News In Kannada | News Belgaum

40% ಕಮಿಷನ್ ಸೇರಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆಯಾಗುತ್ತೆ: ಸಿಎಂ ಸಿದ್ದರಾಮಯ್ಯ

ಹಾಸನ: ಬಿಜೆಪಿ ಸರ್ಕಾರದ40% ಕಮಿಷನ್ ಆರೋಪ ಸೇರಿ ಎಲ್ಲದರ ಬಗ್ಗೆ ತನಿಖೆಯಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಡಿಸಿದ್ದಾರೆ.

ಕೆಂಪೇಗೌಡ ಜಯಂತಿ ಹಿನ್ನಲೆ ಹಾಸನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರ ಕುರಿತು ಮಾತನಾಡಿದ ಅವರು, ‘ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್, 40% ಕಮಿಷನ್ ಆರೋಪ ಸೇರಿ ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆಯೂ ಮರು ತನಿಖೆ ಆಗಲಿದೆ ಎಂದು ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರವೇನು ಪುಕ್ಕಟೆಯಾಗಿ ರಾಜ್ಯಕ್ಕೆ ಅಕ್ಕಿ ಪೂರೈಸಲ್ಲ. ಹಣ ಕೊಡುತ್ತೀವಿ ಎಂದರೂ ಅಕ್ಕಿ ಪೂರೈಸುತ್ತಿಲ್ಲವೆಂದು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಬಡವರ ಮೇಲೂ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಈ ಕಾರಣದಿಂದ ಬೇರೆ ಕಡೆಯಿಂದ ಅಕ್ಕಿ ಖರೀದಿಸಲು ಪ್ರಯತ್ನ ಮಾಡುತ್ತಿದ್ದೇವೆ. ನಾಳಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಈ ಕುರಿತು ತೀರ್ಮಾನ ಮಾಡುತ್ತೇವೆ. ಅಕ್ಕಿ ಸಿಕ್ಕಿದ ಕೂಡಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.

ಈಗಾಗಲೇ 5 ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ ಜಾರಿಯಾಗಿದೆ. ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನ ಕೂಡ ಜಾರಿಗೆ ತೀರ್ಮಾನ ಮಾಡಲಾಗಿದೆ. ಈಗಾಗಲೇ ಉಚಿತವಾಗಿ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. 10 ಕೆಜಿ ಕೊಡಲು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. ಅಷ್ಟು ಪ್ರಮಾಣದ ಅಕ್ಕಿ ನಮಗೆ ಸಿಗುತ್ತಿಲ್ಲ. ಎಫ್​ಸಿಐನವರು ಮೊದಲು ಅಕ್ಕಿ ಪೂರೈಸುವುದಾಗಿ ಹೇಳಿದ್ದರು. ಆ ನಂತರ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಎಂದು ಹೇಳಿದೆ. ಕೇಂದ್ರದ ಬಳಿ ಅಕ್ಕಿ ಇದ್ದರೂ ರಾಜ್ಯಕ್ಕೆ ಕೊಡಲ್ಲ ಅಂತಿದ್ದಾರೆ ಎಂದು ಅಸಮಧಾನ ಹೊರಹಾಕಿದ್ದಾರೆ.//////