ಕನ್ನಡಪರ ಸಂಘಟನೆ, ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್: ಕರ್ನಾಟಕ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಕನ್ನಡಪರ ಸಂಘಟನೆ, ರೈತರು ಹಾಗೂ ಹೋರಾಟಗಾರರ ಮೇಲಿನ ವಿಚಾರಣೆ ಹಂತದಲ್ಲಿರುವ ಕೇಸ್ಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಸ್ಗಳನ್ನು ಹಿಂಪಡೆಯುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದರು. ಕೇಸ್ಗಳನ್ನು ಹಿಂಪಡೆಯಲು ಸಂಪುಟ ಉಪಸಮಿತಿ ರಚನೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೃಷ್ಣ, ಕಾವೇರಿ ಸೇರಿದಂತೆ ವಿವಿಧ ನೀರಾವರಿ ವಿವಿಧ ನೀರಾವರಿ ನ್ಯಾಯಾಧಿಕರಣ ಕಾನೂನು ವಿಷಯಗಳ ಅನುಷ್ಠಾನ, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಪುಟ ಉಪಸಮಿತಿ ರಚನೆ ಮಾಡಲಾಗುವುದು. ಆನೇಕಲ್, ಚಂದಾಪುರ ಒಳಚರಂಡಿ ಕಾಮಗಾರಿಗೆ 106 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.//////