ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಕಲ್ಲು ಹಾಕುತ್ತಿದೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರದವರು ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಕೊಡುತ್ತೇವೆ ಎಂದರೂ ಕೇಂದ್ರ ಅಕ್ಕಿ ಪೂರೈಸಲು ಕೇಂದ್ರದವರು ಸಿದ್ಧರಿಲ್ಲ. ಬಡವರ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಆಹಾರ ಸಚಿವ ಮುನಿಯಪ್ಪ ಗೋಯಲ್ರನ್ನು ಭೇಟಿ ಮಾಡಿದ್ದರು.
ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಇಲ್ಲ ಎಂದಿದ್ದಾರೆ. ನಾನೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದೆ. ಆಹಾರ ಸಚಿವ ಪಿಯೂಷ್ ಗೋಯಲ್ಗೆ ಹೇಳುತ್ತೇನೆ ಎಂದಿದ್ದರು. ನಂತರ ಗೋಯಲ್ ಅವರನ್ನು ಮುನಿಯಪ್ಪ ಭೇಟಿಯಾಗಿ ಮನವಿ ಮಾಡಿದ್ದರು. ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದರು. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.//////