Belagavi News In Kannada | News Belgaum

ಐದು ಕೆಜಿ ಅಕ್ಕಿ ಬದಲಿಗೆ ಹಣ; ಸಚಿವ ಸಂಪುಟ ಮಹತ್ವದ ನಿರ್ಧಾರ

ಬೆಂಗಳೂರು: ಕಾಂಗ್ರೆಸ್  ಅನ್ನಭಾಗ್ಯ ಯೋಜನೆಯಡಿಯಲ್ಲಿ ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ  ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್​​ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್​ ಕಾರ್ಡ್​​ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ.

ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.
ಅಕ್ಕಿ ಸಿಗವ ವರೆಗೆ ಮಾತ್ರ ಹಣ

ಅಕ್ಕಿ ಸಿಗುವವರೆಗೆ  ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.////