Belagavi News In Kannada | News Belgaum

ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಸಾವಿನ ಸುತ್ತ ಅನುಮಾನದ ಹುತ್ತ

ಬೆಳಗಾವಿ: ಬೆಳಗಾವಿ ಎಸ್‌ಸಿ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ ಮಣ್ಣಿಕೇರಿ (48)ಸಾವನ್ನಪ್ಪಿದ್ದು, ಸಾವಿನ ಬಗ್ಗೆ ತನಿಖೆಗೆ ಕುಟುಂಬಸ್ಥರು ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತು ಬೆಳಗಾವಿ ಕ್ಯಾಂಪ್ ಠಾಣೆಗೆ ಮೃತರ ಸಹೋದರಿ ದೂರು ನೀಡಿದ್ದಾರೆ.

ಅಶೋಕ ಮಣ್ಣಿಕೇರಿ ಅವರು ಊಟ ಮಾಡಿ ಮಲಗಿದ್ದಾಗ, ತಡರಾತ್ರಿ ತೀವ್ರ ಹೃದಯಾಘಾತ ಉಂಟಾಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಶೋಕ ಮಣ್ಣಿಕೇರಿ, ಬೆಳಗಾವಿ ಕ್ಲಬ್ ರಸ್ತೆಯ ತಮ್ಮ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದ್ದು ತಕ್ಷಣವೇ ಅವರನ್ನು ಕುಟುಂಬಸ್ಥರು ಕೆಎಲ್‌ಐ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಪ್ರಕರಣಕ್ಕೆ ಟ್ವಿಸ್ಟ್:  ಪೊಲೀಸ್‌ ಠಾಣೆ ಮೆಟ್ಟಿಲೇರಿದ ತಹಶೀಲ್ದಾರ್ ಕುಟುಂಬಸ್ಥರು, ಅಶೋಕ್ ಮಣ್ಣಿಕೇರಿ ಅವರ ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ.
ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಘಾತವಾಗಿದೆ ಎಂದು ಪತ್ನಿ ಹಾಗೂ ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ತನಿಖೆಗೆ ಕುಟುಂಬಸ್ಥರು ಒತ್ತಾಯ ಮಾಡುತ್ತಿದ್ದಾರೆ.  ಈ ಕುರಿತು ಬೆಳಗಾವಿ ಕ್ಯಾಂಪ್ ಠಾಣೆಗೆ ಮೃತರ ಸಹೋದರಿ ದೂರು ನೀಡಿದ್ದಾರೆ.
ಬಾಮೈದನ ಮೇಲೆ ಹಲ್ಲೆ: ಬೆಳಗಾವಿಯ ಕ್ಯಾಂಪ್ ಠಾಣೆ ಎದುರು ಮೃತ ತಹಶೀಲ್ದಾರ್ ಅವರ ಹೆಂಡತಿಯ ತಮ್ಮನ ಮೇಲೆ ಮೃತರ ಸ್ನೇಹಿತರು ಹಲ್ಲೆಗೆ ಯತ್ನಿಸಿದ್ದಾರೆ. ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಲು ಕಟುಂಬಸ್ಥರು ಹಾಗೂ ಸ್ನೇಹಿತರು ಠಾಣೆಗೆ ಬಂದಿದ್ದರು. ಇದೇ ವೇಳೆ ಠಾಣೆ ಎದುರು ಸಾಮ್ಯುಯಲ್ ಪ್ರತ್ಯಕ್ಷನಾಗಿದ್ದಾನೆ. ಇದೇ ವೇಳೆ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಸಚಿವೆ ಹೆಬ್ಬಾಳಕರ ಸಂತಾಪ: ಅಶೋಕ್ ಮಣ್ಣೀಕೇರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು 2018 ರ ಚುನಾವಣೆಯಲ್ಲಿ ಗೆದ್ದಾಗ ಅವರ ಆಪ್ತ ಸಹಾಯಕರಾಗಿದ್ದರು. ಅಶೋಕ್ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದು, “ಅಶೋಕ ಮಣ್ಣಿಕೇರಿ ನಿಧನ ತೀವ್ರ ನೋವು ಉಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಕಂಬನಿ ಮಿಡಿದಿದ್ದಾರೆ./////