22 ವರ್ಷದ ಯುವತಿ ಅನುಮಾಸ್ಪದ ಸಾವು

ಮುದ್ದೇಬಿಹಾಳ: 22 ವರ್ಷದ ಯುವತಿಯೊಬ್ಬಳು ತೆರೆದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಹಳ್ಳೂರ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಳನ್ನು ಹಳ್ಳೂರ ಗ್ರಾಮದ ಮಂಜುಳಾ ಚನ್ನಪ್ಪಗೌಡ ಪಾಟೀಲ ಎಂದು ಗುರುತಿಸಲಾಗಿದೆ.
ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ./////