Belagavi News In Kannada | News Belgaum

ಅಥಣಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಅಕ್ರಮ ಮರಳುಗಾರಿಕೆ ಮೇಲೆ ದಾಳಿ .

ಅಥಣಿ :ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವವರ ಮೇಲೆ ಹಠಾತ್ತನೆ ದಾಳಿ ನಡೆಸಿದ ಅಥಣಿ ಪೊಲೀಸರು 25 ಟ್ರ್ಯಾಕ್ಟರ್ ,4 ಜೆಸಿಬಿ 1 ಹೈವಾ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ..

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿದ್ದು ಪೊಲೀಸರು  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ..

ಡಿವೈಎಸ್ಪಿ ಶ್ರೀಪಾದ ಜಲ್ದೇ ನೇತೃತ್ವದಲ್ಲಿ ದಾಳಿ ನಡೆದಿದ್ದು 3 ಜನ ಪಿಎಸ್ಐ ಒರ್ವ ಸಿಪಿಪಿ 20ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ..

ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

ಇನ್ನು ಹುಕ್ಕೇರಿ ವ್ಯಾಪ್ತಿಯಲ್ಲಿ ಕೂಡ ಈ ರೀತಿ ಅಕ್ರಮ ಮರಳು ದಂಧೆ ನಡೆದಿದೆ ಎನ್ನುವ ಮಾಹಿತಿ ಕಲೆ ಹಾಕಿ ಕ್ರಮ ಕೈಗೊಳ್ಳಬೇಕಾಗಿದೆ ಬೆಳಗಾವಿ ಜಿಲ್ಲೆಗೆ ದಕ್ಷ ಎಸ್ಪಿ ಡಾ. ಸಂಜೀವ್ ಪಾಟೀಲ್ ಅಂತವರನ್ನ ಜಿಲ್ಲೆಗೆ ಬೇಕಾಗಿತ್ತು ಅವರೇ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ