ಅಮೆರಿಕ ಒಕ್ಕಲಿಗರ ಪರಿಷತ್‍ನ 17ನೇ ಸಮ್ಮೇಳನ : ಡಿಸಿಎಂ ಡಿಕೆಶಿ ವರ್ಚುವಲ್ ಭಾಷಣ

ಬೆಂಗಳೂರು: ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ನಮ್ಮ ಸಮಾಜ, ಮಠ, ಭಾಷೆ, ನೆಲ ಜಲ ಕಾಪಾಡಲು ನಾವು ಶ್ರಮಿಸಿ ಹೊರ ದೇಶದಲ್ಲೂ ನಮಗೆ ಹೆಸರು ತಂದಿದ್ದೀರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅಮೆರಿಕದ ಡೆಟ್ರೈಟ್‍ನಲ್ಲಿ ನಡೆದ ಅಮೆರಿಕ ಒಕ್ಕಲಿಗರ ಪರಿಷತ್‍ನ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗಿಯಾಗಿ ಅವರು ಮಾತನಾಡಿದರು.
ಈ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತಿರುವುದು ನನಗೆ ಅತೀವ ಸಂತಸ ತಂದಿದೆ ಮತ್ತು ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದ ಅವರು, ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಪ್ರಗತಿ ಎಂಬ ಮಾತನ್ನು ಆಗಾಗ್ಗೆ ಹೇಳುತ್ತಿರುತ್ತೇನೆ.
ಅದೇ ರೀತಿ ನೀವು 1991ರಿಂದ ಒಕ್ಕಲಿಗ ಸಮುದಾಯದವರು ಅಮೆರಿಕದಲ್ಲಿ ಸಂಘಟಿತರಾಗಿ ಕೆಲಸ ಮಾಡುತ್ತಾ ನಮ್ಮ ರಾಜ್ಯಕ್ಕೂ ಕೊಡುಗೆ ನೀಡುತ್ತಿರುವುದು ಅಭಿನಂದನ ಮತ್ತು ಈ ವಿಶಿಷ್ಟ ಪ್ರಯತ್ನಕ್ಕೆ ನೀವು ಮುಂದಾಗಿರುವುದು ಸಹ ಪ್ರಶಂಸೆ ವ್ಯಕ್ತಪಡಿಸಬೇಕು ಎಂದರು.
ನೀವು ನಮ್ಮ ರಾಯಭಾರಿಗಳು. ನಮ್ಮ ನೆಲ ಜಲದ ಬಗ್ಗೆ ತೋರುವ ಪ್ರೀತಿ ನೀರು, ಗಾಳಿ, ಅಗ್ನಿ, ಸೂರ್ಯ, ಗಿಡ ಮರಗಳಿಗೆ ಜಾತಿ ಇಲ್ಲ. ನಾವು ಹುಟ್ಟು ಹಾಕಿಕೊಂಡಿದ್ದೇವೆ. ಕುವೆಂಪು ಅವರು ಹೇಳಿದ ವಿಶ್ವ ಮಾನವ ತತ್ವವನ್ನು ನಾವು ಎಷ್ಟೇ ಅನುಸರಿಸಿದರು.
ಸೋಮವಾರ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ನಾನು ಈ ಕಾರ್ಯಕ್ರಮಕ್ಕೆ ಖುದ್ದಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ರಾಜ್ಯದ ಜನತೆ ನಮ್ಮ ಮೇಲೆ ವಿಶ್ವಾಸ ಇಟ್ಟು, ಅಧಿಕಾರ ಕೊಟ್ಟಿದ್ದಾರೆ. ಅವರ ನಂಬಿಕೆ ಉಳಿಸಿಕೊಂಡು ಕೆಲಸ ಮಾಡಬೇಕಾಗಿದೆ ಎಂದರು.
ನನಗೆ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಚೆಲುವರಾಯಸ್ವಾಮಿ ಅವರಿಗೆ ಕೃಷಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರು ನಗರವನ್ನು ಇಡೀ ವಿಶ್ವ ಗಮನಿಸುತ್ತಿದೆ ಎಂದು ಹೇಳಿದರು.ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿನ ಬಗ್ಗೆ ಮಾತನಾಡುತ್ತಾ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ಪ್ರದೇಶಗಳಿಗೆ ಹೋಗುತ್ತಿದ್ದರು. ಈಗ ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುತ್ತಿದ್ದಾರೆ. ಬೇರೆ ದೇಶಗಳು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿವೆ ಎಂದು ಬಣ್ಣಿಸಿದ್ದರು./////