ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನ ಸಿಎಂ ಉದ್ಘಾಟನೆ

ಬೆಂಗಳೂರು :ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.