Belagavi News In Kannada | News Belgaum

ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಹೆಚ್.​ಕೆ. ಪಾಟೀಲ್

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದ್ದು, ಇದು ದುರ್ದೈವ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸದನದಲ್ಲಿ ಯಾವಾಗಲೂ ವಿಪಕ್ಷ ನಾಯಕರು ಇದ್ದೇ ಇರುತ್ತಿದ್ದರು. ವಿರೋಧ ಪಕ್ಷದ ನಾಯಕನಿಲ್ಲದೇ ರಾಜ್ಯಪಾಲರ ಭಾಷಣ ಮಾಡಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲ ಎಂದರು.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯ ವಿಚಾರ ಇರಬಹುದು. ಆದರೆ ಸದನದ ಘನತೆ ಮತ್ತು ಸಂಸ್ಕೃತಿ, ಪರಂಪರೆಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್​ ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಪ್ರಕಟಣೆ ನೀಡುವ ಮೂಲಕ ವ್ಯಂಗ್ಯವಾಡಿತ್ತು. ಅದೇ ರೀತಿಯಾಗಿ ಇಂದು ಕೂಡ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಬಿಜೆಪಿ ಕಾಲೆಳೆದಿದೆ./////