Belagavi News In Kannada | News Belgaum

ನಾಳೆ ಸಂಸದೆ ಮಂಗಳಾ ಅಂಗಡಿ ಕಚೇರಿ ಎದುರು ಯುತ್‌ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿ: ಬಡವರಿಗೆ ನೀಡವ ಅನ್ನಭಾಗ್ಯ ಯೋಜನೆಯ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ನಾಳೆ ಮಧ್ಯಾಹ್ನ 12 ಗಂಟೆಗೆ ನಗರದ ಸದಾಶಿವ ನಗರದಲ್ಲಿರುವ ಸಂಸದೆ ಮಂಗಳಾ ಅಂಗಡಿಯವರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಯುತ್‌ ಕಾಂಗ್ರೆಸ್‌ ಅಧ್ಯಕ್ಷ ಕಾರ್ತಿಕ ಬಿ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲಾ, ತಾಲೂಕು ಘಟಕದ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್‌ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.////