ಹೋಟೆಲ್‌ಗೆ ನುಗ್ಗಿದ ಟ್ರಕ್: 9 ಜನರು ಸಾವು

ಮುಂಬೈ: ಟ್ರಕ್ವೊಂದು ಧುಲೆಯ ಹೆದ್ದಾರಿ ಬಳಿ ನಿಯಂತ್ರಣ ತಪ್ಪಿದ ಟ್ರಕ್ ಮೊದಲಿಗೆ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ಇದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಜನರು ಗಾಯಗೊಂಡಿರುವ ಘಟನೆ ಮುಂಬೈ-ಆಗ್ರಾ ಹೆದ್ದಾರಿಯ ಧುಲೆ ಜಿಲ್ಲೆಯ ಪಲಾಸ್ನೆರ್ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಮುಂಬೈ, ಆಗ್ರಾ ಹೆದ್ದಾರಿಯಲ್ಲಿ ಭಯಾನಕ ಅಪಘಾತ ಸಂಭವಿಸಿದೆ. ಧುಲೆಯ ಹೆದ್ದಾರಿ ಹೋಟೆಲ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಸಿಸಿಟಿವಿಯಲ್ಲಿ ಅಪಘಾತದ ಭಯಾನಕ ದೃಶ್ಯ ಸೆರೆಯಾಗಿದೆ. ಮಹಾರಾಷ್ಟ್ರದ ಮುಂಬೈಯಿಂದ ಧುಲೆಗೆ ಸುಮಾರು 300 ಕಿಮೀ ದೂರವಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.////