Belagavi News In Kannada | News Belgaum

5 ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಬಿಜೆಪಿ ಐದು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಗುಜರಾತ್, ತೆಲಂಗಾಣ, ಪಂಜಾಬ್, ಜಾರ್ಖಂಡ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಹೊಸ ರಾಜ್ಯ ಪಕ್ಷದ ಅಧ್ಯಕ್ಷರನ್ನು ಘೋಷಿಸಿದೆ.

ತೆಲಂಗಾಣದ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಿಶನ್ ರೆಡ್ಡಿ, ತೆಲಂಗಾಣ ಚುನಾವಣಾ ಸಮಿತಿ ಅಧ್ಯಕ್ಷರಾಗಿ ಟಿ. ರಾಜೇಂದ್ರ, ಆಂಧ್ರ ಪ್ರದೇಶದ ಬಿಜೆಪಿ ಘಟಕದ ಆಧ್ಯಕ್ಷರಾಗಿ ಪುರಂದರೇಶ್ವರಿ, ಜಾರ್ಖಂಡ್ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಾಬುಲಾಲ್ ಮುರಂಡಿ, ಪಂಜಾಬ್ ಬಿಜೆಪಿ ಘಟಕದ ಆಧ್ಯಕ್ಷರಾಗಿ ಸುನೀಲ್ ಜಾಖತ್, ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷರಾಗಿ ಗಜೇಂದ್ರ ಸಿಂಗ್ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.//////