Belagavi News In Kannada | News Belgaum

ವಿವಿಧ ಪ್ರಕಟಣೆಗಳು

ಮಹಾನಗರ ಪಾಲಿಕೆಯ ವಿವಿಧ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಚುನಾವಣೆ

ಬೆಳಗಾವಿ, ಜು.05 : ಬೆಳಗಾವಿ ಮಹಾನಗರ ಪಾಲಿಕೆಯ ವಿವಿಧ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಚುನಾವಣೆ ಜುಲೈ.7 2023 ರಂದು ಮುಂಜಾನೆ 11-00 ಗಂಟೆಗೆ ಪಾಲಿಕೆ ಪರಿಷತ್ ಸಭಾಗೃಹದಲ್ಲಿ ಜರುಗಲಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ರಾಷ್ಟ್ರೀಯ ವೈದ್ಯರ ದಿನ: ಡಾ.ಬಿ.ಪಿ.ರಾಯ್ ಪ್ರಶಸ್ತಿ ಪ್ರಧಾನ

ಬೆಳಗಾವಿ, ಜು.05: ರಾಷ್ಟ್ರೀಯ ವೈದ್ಯರದಿನದ ಅಂಗವಾಗಿ ವಿಧಾನಸಭಾ ಬೆಂಗಳೂರಿನಲ್ಲಿ ಜಾಗತಿಕ ಪಿಡುಗು ಕೊರೊನಾ ವೈರಸನಂತಹ ಸಂದಿಗ್ಧ ಸನ್ನಿವೇಸದಲ್ಲಿ ಆರೋಗ್ಯ ಸುಧಾರಣೆ ಮತ್ತು ಸೋಂಕು ನಿಯಂತ್ರಣಕ್ಕೆ ಅವಿರತವಾಗಿ ಶ್ರಮ ವಹಿಸಿದಂತಹ ವೈದ್ಯರನ್ನು ನೆನೆಯುವ ಉದ್ದೇಶದಿಂದ ಈ ವರ್ಷದ ವೈದ್ಯರ ದಿನ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಉತ್ತಮ ಸಾಧನೆಗೈದ ಯಳ್ಳೂರಿನ ಪ್ರಾಥಮಿಕ ಆರೋಗ್ಯ ಕೇಂದದ್ರ ವೈದ್ಯಾಧಿಕಾರಿಗಳಾದ ಡಾ. ರಮೇಶ ದಂಡಗಿ ಅವರಿಗೆ ಮುಖ್ಯ ಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಜ್ಯಮಟ್ಟದ ಅಧಿಕಾರಿಗಳು ಡಾ. ಬಿ, ಸಿ ರಾಯ್ ಪ್ರಶಸ್ತಿ ಪ್ರಧಾನ ಮಾಡಿ ಸತ್ಕರಿಸಿದರು .
ಇದಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ತಾಲೂಕಿನ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ರಾಷ್ಟ್ರೀಯ ವೈದ್ಯರ ದಿನದಂದು.

///

ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಬೆಳಗಾವಿ, ಜು.05: ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ (ಜು.8) ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಕೇಂದ್ರ ಸಭಾಭವನದಲ್ಲಿ ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಬೆಳಗಾವಿಂiÀ ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕರಾದ ಮಹಾಂತೇಶ ಕವಟಗಿಮಠ ಅವರು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ, ಧಾರವಾಡ ಹಿರಿಯ ಸಾಹಿತಿಗಳಾದ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ.
ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷರಾದ ಪೆÇ್ರ. ಮಲ್ಲಿಕಾರ್ಜುನ್ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////