Belagavi News In Kannada | News Belgaum

ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಗೆ ನಾಳೆಯೇ ಭೇಟಿ ನೀಡುವುದಾಗಿ : ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು

ಬೆಂಗಳೂರು: ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಗೆ ನಾಳೆಯೇ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು..

ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು. ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು,.

24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಮಳೆಹಾನಿ ಪರಿಹಾರಕ್ಕೆ ಆರ್ಥಿಕ ತೊಂದರೆ ಇಲ್ಲ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಡುಪಿಗೆ ಹೋಗಿ ಬಂದ ನಂತರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡ್ತೇನೆ ಎಂದು ಸ್ಪಷ್ಟಪಡಿಸಿದರು..