Belagavi News In Kannada | News Belgaum

ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆ

ಬೆಳಗಾವಿ: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯ ಹಲವೆಡೆ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರೆದಿದೆ. ಬುಧವಾರ ತಡರಾತ್ರಿ ಬೆಳಗಾವಿ ನಗರ ಸೇರಿದಂತೆ ಖಾನಾಪುರ, ಕಿತ್ತೂರು, ಬೈಲಹೊಂಗಲ ತಾಲೂಕಿನಲ್ಲಿ ಸಾಧಾರಣ ಮಳೆ, ಗುರುವಾರ ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.
ಬೆಳಗಾವಿ ನಗರ ಹಾಗೂ ತಾಲೂಕು ಸೇರಿದಂತೆ ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ಮೂಡಲಗಿ, ಹುಕ್ಕೇರಿ, ಗೋಕಾಕ, ನಿಪ್ಪಾಣಿ, ಅಥಣಿ, ತಾಲೂಕಿನ ಹಲವೆಡೆ ತುಂತುರು ಮಳೆಯಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಅಲ್ಲಲ್ಲಿ ಮಳೆ, ಘಟಪ್ರಭಾ ಜಲಾಶಯಕ್ಕೆ 85 ಕ್ಯೂಸೆಕ್ ಒಳ ಹರಿವು ಬಂದಿದ್ದು, ಮಲಪ್ರಭಾ ಜಲಾಶಯಕ್ಕೆ ಇನ್ನೂ ಹರಿವು ಬಂದಿಲ್ಲ. ಆದರೆ, ಜಿಲ್ಲೆಯ ಹಲವೆಡೆ ಮಳೆ ಸಾಧಾರಣವಾಗಿರುವುದು ಇನ್ನಾದರೂ ಮುಂಗಾರು ಚುರುಕಾದೀತು ಎಂಬ ನಿರೀಕ್ಷೆ ರೈತರಲ್ಲಿದೆ./////