ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ರಾಶಿಂಗೆ

ಹುಕ್ಕೇರಿ : ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಬೆಳಗಾವಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಅಧ್ಯಕ್ಷರಾಗಿ ಮಲ್ಲಿಕಾರ್ಜುನ ರಾಶಿಂಗೆ, ಪದಾಧಿಕಾರಿಗಳಾಗಿ ಮಹಾದೇವ ತಳವಾರ, ದಿಲೀಪ ಹೊಸಮನಿ, ಸಿದ್ಧಾರ್ಥ ಶಿಂಗೆ, ಪ್ರಕಾಶ ಮಾದರ ಅವರನ್ನು ನೇಮಕ ಮಾಡಲಾಗಿದೆ.
ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಜಿಲ್ಲಾ ನೂತನ ಸಮಿತಿಯನ್ನು ರಚಿಸಲಾಯಿತು.
ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ ಮಹಾಸಭಾ ರಾಜ್ಯ ಅಧ್ಯಕ್ಷರೂ ಆದ ನಿವೃತ್ತ ಐಎಎಸ್ ಅಧಿಕಾರಿ ಸಿದ್ಧಯ್ಯ, ಛಲವಾದಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.