Belagavi News In Kannada | News Belgaum

ಪಾಕ್ ಮಹಿಳೆಯೊಂದಿಗೆ ಹೊಸ ಜೀವನ ಆರಂಭಿಸಿದ ಭಾರತದ ಸುರ ಸುಂದರ..!

ನವದೆಹಲಿ: ವೀಸಾ ಇಲ್ಲದೇ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ (30) ಮತ್ತು ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಚಿನ್ ಮೀನಾ (25) ಜಾಮೀನು ಪಡೆದು ದೆಹಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಪಾಕ್ ಮಹಿಳೆ  ಭಾರತದ ಪ್ರೇಮಿಯೊಂದಿಗೆ ಹೊಸ ಜೀವನ ಪ್ರಾರಂಭಿಸಲು ಮುಂದಾಗಿದ್ದಾಳೆ.,

ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು ಜುಲೈ ಬಂಧಿಸಿದ್ದರು..

ಶುಕ್ರವಾರ ಸ್ಥಳೀಯ ನ್ಯಾಯಾಲಯ  ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು..