Belagavi News In Kannada | News Belgaum

ಹಿರೇಕೋಡಿ ಜೈನ ಮುನಿ ಹತ್ಯೆ ಪ್ರಕರಣದ ಸಮಗ್ರ ತನಿಖೆಯಾಗಬೇಕು..

ಬೆಳಗಾವಿ:   ಚಿಕ್ಕೋಡಿಯ ಹಿರೇಕೋಡಿಯಲ್ಲಿ ನಡೆದ ಜೈನ ಸ್ವಾಮಿ ಹತ್ಯೆಯನ್ನು ಪ್ರತಿಭಟಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳದ ವತಿಯಿಂದ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು

ತೇಜಪ್ರತಿ ಭೀಮ ಪೀಠದ ಹರಿಗುರು ಮಹಾರಾಜರು, ಕೇದಾರ ಪೀಠದ ಮುತ್ನಾಳ್ ಶಾಖೆಯ ಶಿವಾನಂದ ಶಿವಾಚಾರ್ಯ ಸ್ವಾಮೀಜಿ
ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣ ಭಟ್ ನೇತೃತ್ವದಲ್ಲಿ ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಜುಲೈ 5 ರಂದು ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಈ ಹತ್ಯೆಯ ಓರ್ವ ಹಂತಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಅಹಿಂಸಾವಾದಿ ಜೈನ ಮುನಿಗಳ ಹತ್ಯೆಯ ಸಮಗ್ರ ತನಿಖೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಮೆರವಣಿಗೆ ನಡೆಸಲಾಯಿತು. ಇದರಲ್ಲಿ ಸಾವಿರಾರು ಜೈನ ಬಾಂಧವರು, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಹರಿವು)
ಮೆರವಣಿಗೆಯನ್ನು ಚನ್ನಮ ವೃತ್ತದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.