ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಬೆಳಗಾವಿ ಪ್ರವಾಸಿಮಂದಿರದಲ್ಲಿ ಮಂಗಳವಾರ (ಜು.11) ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು

ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಬೆಳಗಾವಿ ಪ್ರವಾಸಿಮಂದಿರದಲ್ಲಿ ಮಂಗಳವಾರ (ಜು.11) ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು.
———————————————————
* ಜೈನ ಸಮಯದಾಯದ ಕಾಮಕುಮಾರ ನಂದಿ ಮಹಾರಾಜ್ ಅವರ ಬರ್ಬರ ಹತ್ಯೆ ಪ್ರಕರಣವು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ.
* ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮಕ್ಕೆ ಭೇಟಿ ನೀಡಿ, ಪ್ರಕರಣ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿರುತ್ತೇನೆ.
* ಅಲ್ಪಸಂಖ್ಯಾತರ ಹಕ್ಕುಗಳು, ಶಾಸನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಹಿತರಕ್ಷಣೆಯು ಆಯೋಗದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ.
* ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣ ತನಿಖೆ ಹಂತದಲ್ಲಿದ್ದು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
* ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳು ತನಿಖೆಯಲ್ಲಿ ತಿಳಿದುಬರಲಿವೆ.
* ಪ್ರಕರಣದ ಪ್ರಮುಖ ಅಂಶಗಳ ಕುರಿತು ತನಿಖಾ ತಂಡದ ಜತೆಯೂ ಚರ್ಚೆ ನಡೆಸಲಾಗಿದೆ. ಕೊಲೆಯ ಉದ್ಧೇಶ, ಸಾಕ್ಷಿ ನಾಶ ಪ್ರಯತ್ನ, ಕೊಲೆಗೆ ಸಹಕರಿಸಿದರು ಸೇರಿದಂತೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ತಿಳಿಸಲಾಗಿದೆ.
* ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಮೇಲ್ವಿಚಾರಣೆಯನ್ನು ಉತ್ತರ ವಲಯ ಐಜಿಪಿ ಅವರಿಗೆ ವಹಿಸಿಕೊಡುವಂತೆ ಸರಕಾರಕ್ಕೆ ಒಂದು ವಾರದೊಳಗೆ ವರದಿ ಸಲ್ಲಿಸಲಾಗುವುದು.
* ಐಜಿಪಿ ಮೇಲ್ವಿಚಾರಣೆಯಲ್ಲಿ ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು.
* ಕೃತ್ಯಕ್ಕೆ ಸಹಕರಿಸಿದವರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಬಂಧನ ಆಗಬೇಕು.
* ಅಪರಾಧಿಗಳಿಗೆ ಅತ್ಯಂತ ಕಠಿಣವಾದ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು.
* ಯಾವುದೇ ಸಂಸ್ಥೆ ತನಿಖೆ ಮಾಡಿದರೂ ಸರಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ, ಅಲ್ಪಸಂಖ್ಯಾತರ ಆಗೋಗದ ಮಾಜಿ ನಿರ್ದೇಶಕ ಸುರೇಶ್ ತಂಗಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಿರ್ಜಾನವರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.