Belagavi News In Kannada | News Belgaum

ಆರೋಗ್ಯಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.

ಬೆಳಗಾವಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಬೆಳಗಾವಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಮಹೇಶ ಕೋಣ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ ಅವರು ಉದ್ಘಾಟಿಸಿ ವಿಶ್ವ ಜನಸಂಖ್ಯಾ ದಿನಾಚರಣೆಯ ದ್ಯೇಯೆ ಹಾಗೂ ಘೋಷಣೆ ಮೇಲೆ ಮಾತನಾಡುತ್ತಾ ಈ ವರ್ಷದ ಘೋಷವಾಕ್ಯ “ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ, ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆಂದು ಪ್ರತಿಜ್ಞೆಯನ್ನು ಮಾಡೋಣ” ಎಂಬುವದಾಗಿದೆ. ನಾವು ವಿಶ್ವದಲ್ಲಿ ಜನಸಂಖ್ಯೆಯಲ್ಲ ಪ್ರಥಮ ಸ್ಥಾನದಲ್ಲಿದ್ದೇವೆ. ಜನಸಂಖ್ಯೆ ಹೆಚ್ಚಳದಿಂದ ಭೂಮಿಯ ಮೇಲೆ ಉಂಟಾಗುವ ದುಷ್ಪಾರಿಣಾಮಗಳ ಕುರಿತು ಮಾತನಾಡಿ ಆರೋಗ್ಯ ಸಿಬ್ಬಂದಿಯವರು ಫಲಾನುಭವಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಕಲ್ಯಾಣ ವಿಧಾನಗಳ ಬಗ್ಗೆ ಅರಿವು ಮೂಡಿಸಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಆರೋಗ್ಯ ಇಲಾಖೆಯಲ್ಲಿ ದೊರೆಯವ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಉಪನ್ಯಾಸಕರಾಗಿ ಆಗಿಮಿಸಿದ ಡಾ.ಮಹೇಶ ಕಿವುಡಸಣ್ಣನವರ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಮಾತನಾಡುತ್ತಾ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾದೆ. ಈ ಕುಟುಂಬ ಯೋಜನೆಯ ಪಾಕ್ಷಿಕದಲ್ಲಿ ಶಿಭಿರಗಳನ್ನು ಆಯೋಜಿಸಲಾಗಿದೆ. ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಫಲಾನುಭವಿಗಳಿಗೆ ತಿಳಿಸಬೇಕೆಂದರು. ಸಧ್ಯ ಭಾರತ ದೇಶದ ಜನಸಂಖ್ಯೆ 142.8 ಕೋಟಿ ಇದ್ದು ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು. ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಪುರುಷರ ಸಹಬಾಗಿತ್ವ ಕೂಡಾ ಅತ್ಯಂತ ಪ್ರಮುಖವಾಗಿದ್ದು ಎನ್.ಎಸ.ವ್ಹಿ ಶಸ್ತ್ರ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಜನಪ್ರೀಯಗೊಳಿಸುವಂತೆ ಕರೆ ನೀಡಿದರು.

ಅತಿಥಿಗಳಾಗಿ ಆಗಮಿಸಿದ ಡಾ.ಅಮರಪ್ಪಾ ನಾಗಲೀಕರ ಸಹಾಯಕ ಪ್ರಾದ್ಯಾಪಕರು ಅಂಗ ರಚನಾ ವಿಭಾಗ ಬಿಮ್ಸ ಬೆಳಗಾವಿ ಇವರು ಮಾತನಾಡಿ ಜನಸಂಖ್ಯಾ ಸ್ಪೂಟದಿಂದ ಭೂಮಿಯ ಮೇಲೆ ಉಂಟಾಗುವ ಸಮಸ್ಯೆಗಳ ಬಗ್ಗೆ ಎಳೆ ಎಳೆಯಾಗಿ ತಿಳಿಸಿ ಹೇಳಿದರು. ಆದ್ದರಿಂದ ಅರ್ಹ ಫಲಾನುಭವಿಗಳು ಕುಟುಂಬ ಕಲ್ಯಾಣ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಹಾಗೂ ಸಮೃದ್ಧಿ ಜೀವನವನ್ನು ನಡೆಸುವಂತೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಸುಧಾಕರ ಆರ್.ಸಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಬಿಮ್ಸ ಆಸ್ಪತ್ರೆ ಬೆಳಗಾವಿ ಹಾಗೂ ಡಾ.ಬಿ.ಎನ್ ತುಕ್ಕಾರ, ಜಿಲ್ಲಾ ಸವೇಕ್ಷಣಾಧಿಕಾರಿಗಳು ಬೆಳಗಾವಿ ಇವರು ವಿಶ್ವ ಜನಸಂಖ್ಯಾ ದಿನಾಚರಣೆ 2023 ಮಾಹಿತಿ ಶಿಕ್ಷಣ ಸಂಪರ್ಕ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು.

ವೇದಿಕೆಯ ಮೇಲೆ ಡಾ.ಎಮ್.ಎಸ್ ಪಲ್ಲೇದ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿಗಳು ಬೆಳಗಾವಿ, ಡಾ.ಅನಿಲ ಕೊರಬು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಬೆಳಗಾವಿ, ಡಾ.ಸಂತೋಷ ಕೆ ಪ್ರಾದ್ಯಾಪಕರು ಶೇಖ ಹೋಮಿಯೋಪತಿ ಮೆಡಿಕಲ್ ಕಾಲೇಜು ಬೆಳಗಾವಿ, ಹಾಗೂ ಶಿವಾಜಿ ಮಾಳಗೆನ್ನವರ ಜಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳ ಬೆಳಗಾವಿರವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ.ಅಶೋಕ ಶೆಟ್ಟಿ ನಿರ್ದೇಶಕರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಅವರು ಮಾತನಾಡಿ ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಅವುಗಳ ಬಗ್ಗೆ ತಿಳುವಳಿಕೆ ನೀಡಿ, ಸಮಾಜದ ಕೊನೆಯ ವ್ಯಕ್ತಿಗೆ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಪ್ರಯುಕ್ತ ಒಂದು ಹಂತದಲ್ಲಿ ನೆರವಾಗಿದೆ. ದೇಶದ ಸುಸ್ಥಿರ ಅಭಿವೃದ್ಧಿಗೆ ಅತೀ ಜನಸಂಖ್ಯೆ ಮಾರಕವಾಗಿದೆ ಆದ್ದರಿಂದ ಜನಸಂಖ್ಯೆ ನಿಯಂತ್ರಣದ ಅವಶ್ಯಕತೆ ಇದೆ ಎಂದು ತಿಳಿಸಿ, ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿ ಕೇಂದ್ರದ ಪ್ರಶಿಕ್ಷಾಣಾರ್ಥಿಗಳು ಸ್ವಾಗತ ಗೀತೆ ಹಾಡಿದರು. ಡಾ.ಶಿವಾನಂದ ಮಾಸ್ತಿಹೋಳಿ ತಾಲೂಕಾ ಆರೋಗ್ಯಾಧಿಕಾರಿಗಳು ಬೆಳಗಾವಿ ಎಲ್ಲರಿಗೂ ಸ್ವಾಗತ ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿ ಜನಸಂಖ್ಯಾ ಸ್ಪೋಟದಿಂದಾಗುವ ಸಮಸ್ಯೆಗಳು ಹಾಗೂ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳ ಕುರಿತು ಮಾತನಾಡಿ ಜಿಲ್ಲೆಯಲ್ಲಿ ಕುಟುಂಬ ಕಲ್ಯಾಣ ಯೋಜನೆಯನ್ನು ಅಳವಡಿಸಿಕೊಂಡ ಫಲಾನುಭವಿಗಳ ಅಂಕಿ ಸಂಖ್ಯೆಗಳನ್ನು ತಿಳಿಸಿದರು.

ಶ್ರೀ ಬಿ.ಪಿ ಯಲಿಗಾರ ಜಿಲ್ಲಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮ ನಿರೂಪಿಸಿದರು. ಶ್ರೀ ಸಿ.ಜಿ ಅಗ್ನಿಹೋತ್ರಿ ಹಿರಿಯ ಆರೋಗ್ಯ ನಿರೀಕ್ಷಣಾದಿಕಾರಿಗಳು ವಂದಿಸಿದರು. ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯ ಶ್ರೀಮತಿ ಮಹಾದೇವಿ ಶಿವಮೂರ್ತಿಮಠ ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಶ್ರೀಮತಿ ಕವಿತಾ ಕುಂಬಾರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಕಚೇರಿಯ ಸಿಬ್ಬಂದಿಗಳು ಕಾರ್ಯಕ್ರಮವನ್ನು ಸಂಘಟಿಸಿದರು.