Belagavi News In Kannada | News Belgaum

ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ..

ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ ನೇಣಿಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್. ಆತ್ಮಹತ್ಯೆಗೆ ಕಾರಣ ಏನೆಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..

ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.