ಬೆಳಗಾವಿಯಲ್ಲಿ ಯುವಕನ ಬರ್ಬರ ಕೊಲೆ..

ಬೆಳಗಾವಿ: ದುಷ್ಕರ್ಮಿಗಳು ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ಜೈನ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದಲ್ಲಿ ನಡೆದಿದೆ. ಪೀರನವಾಡಿ ಗ್ರಾಮದ ಅರ್ಬಾಜ್ ರಫಿಕ್ ಮುಲ್ಲಾ (25) ಕೊಲೆಗೀಡಾದ ವ್ಯಕ್ತಿ. ಘಟನೆಯಿಂದ ಕಾಲೇಜು ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
..
ಗುರುವಾರ ರಾತ್ರಿ ಎಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕೆಲ ಯುವಕರು ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಯುವಕನ ಕೊಲೆಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಾಂಜಾ ಇಲ್ಲವೇ ಸಾರಾಯಿ ಕುಡಿದ ನಶೆಯಲ್ಲಿ ಗಲಾಟೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ…
ಕೊಲೆ ನಡೆದ ಸ್ಥಳಕ್ಕೆ ಡಿಸಿಪಿ ಶೇಖರ್ ಎಚ್.ಟಿ. ಮತ್ತು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಸ್ಥಳ ಪರೀಕ್ಷೆ ನಡೆಸಿದ್ದಾರೆ. ಕೊಲೆ ಮಾಡಿದ್ದು ಯಾರು ಮತ್ತು ಯಾವಾಗ..?’
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಗೊತ್ತಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ..