Belagavi News In Kannada | News Belgaum

ಪ್ರಧಾನಿ ಮೋದಿ ಸೋಲಿಸಲು ಪ್ರತಿಪಕ್ಷಗಳು ಒಂದಾಗಿವೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿ ಪಕ್ಷಗಳು ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಸಭೆ ಮಾಡುತ್ತಾರೆ. ಆದರೆ ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುತವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..

 

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಇಂತಹ ಪಕ್ಷಗಳಿಂದ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದರು..

 

ಇವರ ಒಕ್ಕೂಟ ರಚನೆಯಿಂದ, ಮತ್ತು ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನು ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಸಾಧ್ಯವಿಲ್ಲದ ಮಾತು. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ. ನಿರ್ಧಿಷ್ಟವಾದ ಕಾರ್ಯಕ್ರಮ ಇಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ ಎಂದರು..

 

ಇನ್ನು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಗ್ಗ ಮಾತನಾಡಿದ ಬಸವರಾಜ ಬೊಮ್ಮಾಯಿ, ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು..

 

ಬಿಜೆಪಿ-ಜೆಡಿಎಸ್‌ ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ. ವಿಪಕ್ಷ ಸ್ಥಾನ ಜುಲೈ 18 ನಂತರ ಘೋಷಣೆ ಆಗಬಹುದೆಂಬ ಮಾಹಿತಿ ಇದೆ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಊಹಾಪೋಹ ಎಂದು ಹೇಳಿದರು..

ಮಾತು ಮುಂದುವರಿಸಿದ ಅವರು, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸೋನಿಯಾ ಗಾಂಧಿ ಬರುತ್ತಿದ್ದಾರೆ. ಗೃಹಲಕ್ಷ್ಮಿ ಈಗಾಗಲೇ ಎಡವಟ್ಟಾಗಿದೆ. ದಿನಾಂಕದ ಮೇಲೆ ದಿನಾಂಕ ಮುಂದುಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮಗಳನ್ನು ಮಾಡುತ್ತಿಲ್ಲ..

ದೊಡ್ಡ ಭಾರ ಆಗುತ್ತಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಾಂಕ ಮುಂದೆ ಹಾಕಿ ಕೆಲವೇ ಸಮಯದಲ್ಲಿ, ಕೆಲವರಿಗೆ ಜನರಿಗೆ ಮಾತ್ರ ಪ್ರಾರಂಭ ಮಾಡುವ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣು ಮಕ್ಕಳಿಗೆ ಭ್ರಮನಿರಸ ಮಾಡುವಂತಹ ಉದ್ದೇಶ ಈ ಯೋಜನೆ. ಅಧಿವೇಶನದಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ ಎಂದರು.