ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಹೂಗುಚ್ಚ ನೀಡಿ ಸಿಎಂ ಸ್ವಾಗತ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ವಿಪಕ್ಷಗಳ ಎರಡನೇ ಸಭೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಜು 17) ಆರಂಭವಾಗಲಿದೆ. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ. ವಿವಿಧ ಪಕ್ಷಗಳ ಹಲವಾರು ಮುಖಂಡರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.
ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೂಗುಚ್ಚ ನೀಡಿ ಸ್ವಾಗತಿಸಿದರು.
ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು./////