Belagavi News In Kannada | News Belgaum

ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರೇ ಫೈನಲ್..

ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಈ ಸಭೆಯಲ್ಲಿ ಹಲವು ವಿಚಾರಗಳ ಚರ್ಚೆಯಾಗಿದೆ. ಇದರಲ್ಲಿ ವಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಡಲು ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದೀಗ ಈ ಹೆಸರು ಅಂತಿಮಗೊಂಡಿದೆ..

26 ಪ್ರಮುಖ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. 2024ರ ಚನಾವಣೆಯಲ್ಲಿ ಮೋದಿಯನ್ನು ಸೋಲಿಸಲು ಎಲ್ಲಾ ಪಕ್ಷಗಳ ಒಗ್ಗಟ್ಟಿನ ಮಂತ್ರ, ಸಿದ್ಧಾಂತ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಇದೇ ಸಭೆಯಲ್ಲಿ ವಿಪಕ್ಷಗಳ ಒಕ್ಕೂಟಕ್ಕೆ ‘INDIA’ ಎಂಬ ಹೊಸ ನಾಮಕರಣವನ್ನು  ಮಾಡಲಾಗಿದೆ..

ಐ: ಇಂಡಿಯನ್
ಎನ್: ನ್ಯಾಷನಲ್
ಡಿ: ಡೆಮಾಕ್ರಟಿಕ್
ಐ: ಇನ್ಕ್ಲೂಸಿವ್
ಎ: ಅಲೈಯನ್ಸ್
ಒಕ್ಕೂಟಕ್ಕೆ ಇಂಡಿಯಾ ಎಂದು ನಾಮಕರಣ ಮಾಡಲು ಸದಸ್ಯ ಪಕ್ಷಗಳು ಒಪ್ಪಿಗೆ ಸೂಚಿಸಲಾಗಿದೆ. ಹೆಸರಿನಲ್ಲೇ ಭಾರತದ ಮತದಾರರನ್ನು ಸೆಳೆಯುವ ಶಕ್ತಿ ಇದೆ ಎಂಬ ಅಭಿಪ್ರಾಯವಿದೆ ಎಂದು ಹೇಳಲಾಗುತ್ತಿದೆ..