Belagavi News In Kannada | News Belgaum

ಕಲಾಪ ಪ್ರತಿಭಟನೆ ವೇಳೆ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥ

ಬೆಂಗಳೂರು: ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊತ್ತು ಹೊರ ಹಾಕುವ ವೇಳೆ ಬಿಜೆಪಿ ಶಾಸಕರು ಪ್ರತಿಭಟನೆ ಮಾಡುತ್ತಿದ್ದರು, ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದರು.

ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥ, ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು, ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಅಂಬ್ಯುಲೆನ್ಸ್‌ ಮೂಲಕ ಶಿಫ್ಟ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ./////