Belagavi News In Kannada | News Belgaum

ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್..

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ..

 

ಹೌದು ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ..

 

ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ರೈತ ನಾಯಕ, ಮೊದಲ ಬಾರಿಗೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ..