Belagavi News In Kannada | News Belgaum

ಪ್ರಾಂಶುಪಾಲನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಖಾಸಗಿ ಕಾಲೇಜಿನ ಪ್ರಾಂಶುಪಾಲ ತಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ  ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.’

 

ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗೂ ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಎಸ್‌ಸಿ, ಎಸ್‌ಟಿ ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಪ್ರೀತಿಸುವುದಾಗಿ ನಾಟಕವಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.’

 

ಇದರಿಂದ ಬೇಸತ್ತ ವಿದ್ಯಾರ್ಥಿನಿ ಬುಧವಾರ ಸಂಜೆ ಕೈ ಕುಯ್ದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸದ್ಯ ಆರೋಪ ಹೊತ್ತಿರುವ ಪ್ರಾಂಶುಪಾಲನ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.