ಪಟ್ಟಣ ಪಂಚಾಯತಿ ಉಪಾಧ್ಯಕ್ಷ ನೇಣಿಗೆ ಶರಣು..

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಪಂಚಾಯತಿ ಉಪಾಧ್ಯಕ್ಷ ನೇಣಿಗೆ ಶರಣಾಗಿದ್ದಾರೆ. ಉಪಾಧ್ಯಕ್ಷ ಹಾಗೂ ವಕೀಲರಾಗಿರುವ ಜಿ.ಎಂ. ಅನಿಲಕುಮಾರ್ ಮೃತ ದುರ್ದೈವಿ..
ಅನಿಲಕುಮಾರ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಡಿಬಂಡೆಯ ಸ್ವಂತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಪಟ್ಟಣ ಪಂಚಾಯತಿ ಸದಸ್ಯರಾಗಿ ನಂತರ ಉಪಾಧ್ಯಕ್ಷರಾಗಿದ್ದರು..
ಗುಡಿಬಂಡೆ ಪಟ್ಟಣದ ಕೆ.ಎಚ್.ಬಿ ಕಾಲೋನಿಯಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ..