ಸಂಜೆ 7 ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು: ಇಂದು ಸಂಜೆ 7 ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಉಪಸ್ಥಿತರಿರಲಿದ್ದಾರೆ..
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಸಂಜೆ 7 ಗಂಟೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತಿತರರು ಹಾಜರಿರಲಿದ್ದಾರೆ. ಸಭೆಯಲ್ಲಿ ಪ್ರಮುಖ ರಾಜಕೀಯ ವಿಚಾರ ಹಾಗೂ ಎನ್ ಡಿ ಎ ಮೈತ್ರಿಕೂಟ ಸೇರ್ಪಡೆ ಬಗ್ಗೆ ಜೆಡಿಎಸ್ ನಾಯಕರು ಚರ್ಚೆ ನಡೆಸಲಿದ್ದಾರೆ..