ಪ್ರೌಢ ಶಾಲಾ ಶಿಕ್ಷಣ ಇಲಾಖೆ: ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೆಳಗಾವಿ, ಜು.21 : ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿಯಲ್ಲಿ 2023 24ನೇ ಸಾಲಿನಲ್ಲಿ ವಿಶೇಷ ಅಗತ್ಯಯುಳ್ಳ ಮಕ್ಕಳ ಶೈಕ್ಷಣಿಕ ಅಭಿವೃಧ್ಧಿಗಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 16 ಪ್ರೌಢ ಶಾಲಾ ಸಮನ್ವಯ ಶಿಕ್ಷಣ ಸಂಪನ್ಮೂಲ (BIERT) ಶಿಕ್ಷಕರ ಒಟ್ಟು 16 ಖಾಲಿ ಹುದ್ದೆಗಳಿದ್ದು, ಸದರಿ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ವಿಶೇಷ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ..
ವಿಶೇಷ ಬಿ.ಎಡ್ ವಿದ್ಯಾರ್ಹತೆ ಹಾಗೂ ಆರ್.ಸಿ.ಐ ಪ್ರಮಾಣ ಪತ್ರಗಳ ಪ್ರಕಾರ ವಿದ್ಯಾಭ್ಯಾಸ ಹೊಂದಿರುವ ಅರ್ಹ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಅಲ್ಲಿಸಬಹುದಾಗಿದೆ. ಸಾಮಾನ್ಯ ಬಿ.ಎಡ್ ವಿದ್ಯಾರ್ಹತೆ ಅನ್ವಯಿಸುವುದಿಲ್ಲ..
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಜು.25 2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು, (ಕಛೇರಿ ಕಾರ್ಯದ ಸಮಯದಲ್ಲಿ) ಸಾಯಂಕಾಲ 5 ಗಂಟೆಯೊಳಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಸಮಗ್ರ ಶಿಕ್ಷಣ ಕರ್ನಾಟಕ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ರವರ ಕಛೇರಿಗೆ ಸಲ್ಲಿಸಬಹುದಾಗಿದೆ..
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಈ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ಸಂಬಂದಿಸಿದ ಎಲ್ಲಾ ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ..
ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ನಂ : 9448999432 ಗೆ ಸಂಪರ್ಕಿಸಬದು ಹಾಗೂ ಕಛೇರಿಯ ಸೂಚನಾ ಫಲಕ ಮತ್ತು ಕಛೇರಿಗೆ ಖುದ್ದಾಗಿ ಭೇಟಿಯಾಗಿ ಮಾಹಿತಿ ಪಡೆಯಬಹುದಾಗಿದೆ ಎಂದು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಚಿಕ್ಕೊಡಿ ಸಮಗ್ರ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..