Belagavi News In Kannada | News Belgaum

ಮೊದಲ ತ್ರೈಮಾಸಿಕ ಕೆಡಿಪಿ ಸಭೆ ಜು.24 ರಂದು

 

ಬೆಳಗಾವಿ, ಜು.21: 2023-24 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳು ಸೇರಿದಂತೆ) ಜೂನ್ 2023 ಮಾಹೆಯ ಅಂತ್ಯದವರೆಗಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೋಮವಾರ(ಜು.24) ಬೆಳಿಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಲೋಕೋಪಯೋಗಿ ಇಲಾಖೆಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ.
****