Belagavi News In Kannada | News Belgaum

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

 

ನವದೆಹಲಿ  ಜುಲೈ 26

ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಚನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಲೋಕೋಪಯೋಗಿ ಸಚಿವರು ಹೇಳಿದರು.