ಶಾಸಕಾಂಗ ಸಭೆಗೂ ಮುನ್ನ ಸಚಿವ ಸಂಪುಟ ಸಭೆ; ಸಂಜೆ 4 ಗಂಟೆಗೆ ಮಹತ್ವದ ಸಭೆ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಚಿವರ ವಿರುದ್ಧ ಕೆಲವು ಶಾಸಕರ ಅಸಮಾಧಾನ ಸ್ಫೋಟ ಹಿನ್ನೆಲೆಯಲ್ಲಿ ಇವತ್ತಿನ ಸಭೆಯು ತುಂಬಾನೇ ಮಹತ್ವ ಪಡೆದುಕೊಂಡಿದೆ.
ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಶಾಸಕರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸಭೆಯಲ್ಲಿ ಸಚಿವರ ವಿರುದ್ಧದ ಅಸಮಾಧಾನದ ಬಗ್ಗೆ ಶಾಸಕರ ಜೊತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಖುದ್ದು ಸಚಿವರ ಜೊತೆಗೆ ಶಾಸಕರ ಬೇಡಿಕೆಗಳ ಕುರಿತು ಸಮಾಲೋಚನೆ ಮಾಡಲಿದ್ದಾರೆ.
ಸಚಿವ ಸಂಪುಟ ಸಭೆಯೂ ನಡೆಯಲಿದೆ
ಇನ್ನು ಶಾಸಕಾಂಗ ಸಭೆಗೂ ಮುನ್ನ ಸಚಿವ ಸಂಪುಟ ಸಭೆಯೂ ನಡೆಯಲಿದೆ. ಸಂಜೆ 4 ಗಂಟೆಗೆ ಈ ಸಭೆ ನಡೆಯಲಿದ್ದು, ಶಾಸಕರ ಅಸಮಾಧಾನ ವಿಚಾರವಾಗಿ ಸಚಿವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.