ಘಟಿಕೋತ್ಸವದಲ್ಲಿ ಮೂರು ಜನರಿಗೆ ಗೌರವ ಡಾಕ್ಟರೇಟ್ ಪ್ರಧಾನ…

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಆ.1ರಂದು ವಿಟಿಯುನ ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ಹೇಳಿದರು..
ಶುಕ್ರವಾರ ವಿಟಿಯು ಸೆನೆಟ್ ಸಭಾಂಗಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಆ.1 ರಂದು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂಧ ಸ್ವಾಮೀಜಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ನ ಗೌರವ ಕಾರ್ಯದರ್ಶಿ ಡಾ.ಎ, ವಿ.ಎಸ್ ಮೂರ್ತಿ ಹಾಗೂ ಮೈಸೂರು ಮೆಕ್ರ್ಯಾನ ಟೈಲ್ ಕಂಪನಿ ಲಿ.ನ ಅಧ್ಯಕ್ಷ ಎಚ್.ಎನ್.ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು ಎಂದರು..
ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿ ಮದಕಶಿರಾ ಚಿನ್ಮಯ ವಿಕಾಸ 13 ಚಿನ್ನದ ಪದಕ ಪಡೆದಿದ್ದಾರೆ, ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ 7, ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್
ಇಂಜನಿಯರಿಂಗ್ ವಿದ್ಯಾರ್ಥಿ ಗುಡಿಕಲ್ ಸಾಯಿ ವಂಶಿ 7, ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಿದ್ಯಾರ್ಥಿ ಕೆ.ಆರ್.ಸಂಪತಕುಮಾರ 7 ಚಿನ್ನದ ಪದಕ ಪಡೆದಿದ್ದಾರೆ. ಒಟ್ಟು 10 ಜನ ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದಾರೆ ಎಂದರು..
ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಉಪಸ್ಥಿತರಿರಲಿದ್ದಾರೆ. ಚೆನ್ನೈ ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ನ ನಿರ್ದೇಶಕರಾದ ಪ್ರೊ. ವಿ. ಕಾಮಕೋಟಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದರು..
ಪದವೀಧರರು ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಈ ವರ್ಷದಿಂದಲೇ ಮೇ ಅಂತ್ಯಕ್ಕೆ ಪದವಿ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ಎರಡು ತಿಂಗಳು ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗುತ್ತಿತ್ತು ಎಂದರು..
ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಪ್ರತಿ ವರ್ಷ ಎರಡೂ ಘಟಿಕೋತ್ಸವ ನಡೆಸಲು ವಿಟಿಯು ಸಿದ್ದವಾಗಿದೆ. ಅಂತಾರಾಷ್ಟ್ರೀಯ ಕ್ಯಾಲೆಂಡರ್ ಹೊಂದಾಣಿಕೆಯಾಗುವಂತೆ ಪಿ.ಜಿ.ಪ್ರವೇಶ ಪರೀಕ್ಷೆ ಏರ್ಪಡಿಸಲಾಗುತ್ತಿದೆ ಎಂದರು.