ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ : ನೇರ ಸಂದರ್ಶನ

ಬೆಳಗಾವಿ, ಆ.02 : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಆ.4 2023 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ “ನೇರ ಸಂದರ್ಶನವನ್ನು ನೆಹರು ನಗರದ ಕೋಲ್ಲಾಪೂರ ಸರ್ಕಲ್ ಬಳಿಯ ಆಕ್ಸಿಸ್ ಬ್ಯಾಂಕ್, ರತ್ನ ಪ್ಲಾಜಾ, ಇಲಿಗೆ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://forms.gle/Nnhkvumvw7r5Row27 hಣಣಠಿs://ಜಿoಡಿms.gಟe/ಓಟಿhಞvumvತಿ7ಡಿ5ಖoತಿ27 ಈ ವೆಬ್‍ಸೈಟ್‍ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು, ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 7975856566, ಇವರನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು, ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.