ಶಾಲೆಯ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಲಹಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಕಾನೂನು ಅರಿವು

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪ್ಯಾನಲ್ ವಕೀಲರು ಬೈಲಹೊಂಗಲ ಹಾಗೂ ಶಾಲೆಯ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಲಹಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪೆನಲ್ ವಕೀಲ ದುಂಡಪ್ಪ ಗರಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಕಾನೂನು ಕುರಿತು ತಿಳಿವಳಿಕೆ ಬೆಳೆಸಿಕೊಳ್ಳಬೇಕು ಎಂದರು.
ಉಪನ್ಯಾಸಕರಾಗಿ ಆಗಮಿಸಿದ ಪೆನಲ್ ವಕೀಲ ಬಸವರಾಜ ದೋತ್ರದ ಮಾತನಾಡಿ, ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳಗಳಿಂದ ರಕ್ಷಣೆ ಮಾಡುವುದರ ಮೂಲಕ ಕಾಯಿದೆಯ ಅನುಷ್ಠಾನ ತರುವಲ್ಲಿ ಎಲ್ಲರ ಜವಾಬ್ದಾರಿ ಇದೆ. ಪೋಕ್ಸೋ ಕಾಯ್ದೆಯ ಕುರಿತು ಮಾರ್ಮಿಕವಾಗಿ ವಿವರಿಸಿದರು.
ಮುಖ್ಯ ಶಿಕ್ಷಕ ಎನ್.ಆರ್.ಠಕ್ಕಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾನೂನುಗಳ ಕುರಿತು ತಿಳಿದುಕೊಳ್ಳುವದು ಅಗತ್ಯವಾಗಿದೆ ಎಂದರು.
ಕಾನೂನು ಸೇವಾ ಸಮಿತಿ ಸಂಚಾಲಕ ಕುಮಾರ ಬಾರಿಮರದ, ಶಿಕ್ಷಕರಾದ ಸುನಿಲ ಭಜಂತ್ರಿ, ವಿರೇಂದ್ರ ಪಾಟೀಲ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ಪ್ರಶಿಕ್ಷಣಾರ್ಥಿಗಳಾದ ಜ್ಯೋತಿ ಹಿರೇಮಠ, ಚೈತ್ರಾ ಹೂಲಿಮಠ, ದೇಮಪ್ಪ ಜೋಗಿಗುಡ್ಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕ ಜಗದೀಶ ನರಿ ಸ್ವಾಗತಿಸಿದರು. ಪೃಥ್ವಿ ಗರಗದ ನಿರೂಪಿಸಿದರು. ಕಾವೇರಿ ಸೊಗಲದ ವಂದಿಸಿದರು.