ನಾಲ್ಕು ಮಂದಿ ಅನುಮಾನಾಸ್ಪದ ಸಾವು

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರೋ ದಾರುಣ ಘಟನೆ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ನಲ್ಲಿ ನಡೆದಿದೆ..
ಮೃತರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಡುಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ..