ವಿವಿಧ ಪ್ರಕಟಣೆ

ಜಗದೀಶ್ ಸರಿಕರ ಅವರಿಗೆ ಪಿಎಚ್‍ಡಿ. ಪದವಿ ಪ್ರಧಾನ
ಬೆಳಗಾವಿ, ಆ.03 : ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಕಾರ್ಯ (ಎಂಮ್‍ಎಸ್.ಡಬ್ಲ್ಯೂ) ವಿಭಾಗದ ಸಂಶೋಧನಾ ವಿದ್ಯಾರ್ಥಿ ಜಗದೀಶ್ ಎಸ್ ಸರಿಕರ ಅವರು ಡಾ. ಚಂದ್ರಶೇಖರ್ ಸಿ. ಬನಸೋಡೆ ಅವರು ಮಾರ್ಗದರ್ಶನದಲ್ಲಿ ಮಂಡಿಸಿದ ಬರ್ಡನ್ ಎಕ್ಷಪಿರಿಯನ್ಸ್ ಬಯ್ ದಿ ಮದರ್ ಆಪ್ ಡಿಸೆಯೆಬಲ್ಡ ಚಿಲ್ಡ್ರನ್ ಎ ಸೋಸಿಯಲ್ ವರ್ಕ ಸ್ಟಡಿ ವಿಥ್ ಸ್ಟೇಸಿಯಲ್ ರೆಫರನ್ಸ ಬೆಳಗಾವಿ ಡಿಸ್ಟ್ರಿಕ್ಟ್ ಪ್ರಬಂಧಕ್ಕೆ ಪಿ. ಎಚ್. ಡಿ. ಪದವಿ ಪ್ರಧಾನ ಮಾಡಲಾಗಿರುತ್ತದೆ///
ಸೆ.9. ರಂದು ಲೋಕ ಅದಾಲತ್
ಬೆಳಗಾವಿ, ಆ.03 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ವಿವಿಧ ಪ್ರಕರಣಗಳಿಗೆ, ಸಂಬಂಧಿಸಿದಂತೆ, ನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಎಲ್. ವಿಜಯಲಕ್ಷ್ಮೀ ದೇವಿ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ಸೆ.9. 2023 ರಂದು ಬೆಳಿಗ್ಗೆ 11 ಘಂಟೆ ಗೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.
ಪ್ರಕರಣಗಳು
ವೈವಾಹಿಕ, ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗಬಹುದಾದಂತಹ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮುಖಾಂತರ ಇತ್ಯರ್ಥಪಡಿಸಲಾಗುವುದು.
ಬ್ಯಾಂಕುಗಳು, ಕಕ್ಷಿದಾರರು ಹಾಗೂ ಜನ ಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬುಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿಗಳನ್ನು ಕೂಡಲೇ ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ಆಹಾರ ಇಲಾಖೆ: ಪಡಿತರದಾರ ಇ-ಕೆವೈಸಿಗೆ ಸೂಚನೆ
ಬೆಳಗಾವಿ, ಆ.03 : ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ” ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು “ಂUಉ-2023” ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ ಮಾಡಲಾಗುವುದು.
ಅಂತ್ಯೋದಯ (ಎಎವೈ) ಓಈSಂ ಪ್ರತಿ ಪಡಿತರ ಚೀಟಿಗೆ ಅಕ್ಕಿ-35 ಕೆ.ಜಿ., ಪಿ.ಎಚ್.ಎಚ್ (ಬಿಪಿಎಲ್) (ಆದ್ಯತಾ) ಓಈSಂ ಪ್ರತಿ ಸದಸ್ಯರಿಗೆ ಅಕ್ಕಿ-05 ಕೆ.ಜಿ, ಎನ್‍ಪಿಹೆಚ್‍ಹೆಚ್ (ಎಪಿಎಲ್) (ಆದ್ಯತೇತರ) (ಒಪ್ಪಿತ ಪಡಿತರ ಚೀಟಿ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-05 ಕೆ.ಜಿ 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-10 ಕೆ.ಜಿ. ನೀಡಿವ ಬದಲಾಗಿ ಪ್ರತಿ ಕೆ.ಜಿ.ಗೆ ರೂ.15, , (Portability) ಅಂತರ್‍ರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯವವರಿಗೆ ಕೇಂದ್ರ ಸರ್ಕಾರದ ಪಡಿತರ ವಿತರಣಾ ಪ್ರಮಾಣ 5 ಕೆ.ಜಿ ಪ್ರತಿ ಸದಸ್ಯರಿಗೆ ಉಚಿತ ನೀಡಲಾಗುವುದು.
,-2023 ನೇ ಮಾಹೆಯ ಅಂತ್ಯದೊಳಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ(ಬಿ.ಪಿ.ಎಲ್) ಪಡಿತರ ಚೀಟಿದಾರರಿಗೆ ಹೊಸ ಸರಕಾರ ಘೊಷಿಸಿದ ಗ್ಯಾರಂಟಿ ಯೋಜನೆಯಡಿ 05 ಕೆ.ಜಿ ಅಕ್ಕಿ ಬದಲಾಗಿ ಪ್ರತಿ ಕೆ.ಜಿ ಗೆ ರೂ.34 ರಂತೆ ನೇರವಾಗಿ ಸಂಬಂದಪಟ್ಟ ಫಲಾನುಬವಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡಲಾಗುವುದು.
ಪಡಿತರ ಚೀಟಿಯಲ್ಲಿರುವ ಕುಟುಂಬ ಮುಖ್ಯಸ್ಥರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ ಅಥವಾ ಪೋಸ್ಟ ಆಫೀಸಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರತಕ್ಕದ್ದು ಹಾಗೂ ಸದರ ಉಳಿತಾಯ ಖಾತೆ ಇ-ಕೆ.ವೈ.ಸಿ ಮಾಡಿಕೊಂಡಿರಬೇಕು.
ಕಳೆದ ಮೂರು ತಿಂಗಳಿನಿಂದ ಸತತವಾಗಿ ಪಡಿತರ ಪಡೆದಿರತಕ್ಕದ್ದು ಅಂತಹ ಫಲಾನುಬವಿಗಳಿಗೆ ಡಿ.ಬಿ.ಟಿ ಮೂಲಕ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗುವುದು.
ಜಿಲ್ಲೆಯಲ್ಲಿ 68,587 ಅಂತ್ಯೋದಯ, 10,78,860 ಬಿಪಿಎಲ್ ಹಾಗೂ 3,21,440 ಎಪಿಎಲ್ ಪಡಿತರ ಚೀಟಿಗಳು ಸೇರಿ ಒಟ್ಟು 14,68,887 ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ.
ತಿಂಗಳ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿರಿವುದರಿಂದ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬಹುದಾಗಿದೆ.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಆ. 31 ಅಂತಿಮ ಗಡುವು ನೀಡಲಾಗಿರುತ್ತದೆ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು.
ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ ಆಹಾರ ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ: 26 ಪ್ರಕರಣ ದಾಖಲು
ಬೆಳಗಾವಿ, ಆ.03: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೆÇಲೀಸ್ ಇಲಾಖೆಯ ಸಹಯಗದೊಂದಿಗೆ ಬೆಳಗಾವಿಯ ಡಿಸಿ ಕಚೇರಿ ಆವರಣದಲ್ಲಿ ಗುರುವಾರ (ಆ.3) ರಂದು 2003 ರ ಕಾಯ್ದೆಯಡಿಯಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲಿಸಲಾಯಿತು.
ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಬೆಳಗಾವಿ ಜಿಲ್ಲೆ ಇವರ ಮೌಖಿಕ ಆದೇಶದನ್ವಯ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಡಿಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ಕುರಿತು ಅರಿವು ಮೂಡಿಸಿ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ 2003 ಕಾಯ್ದೆ ಅಡಿಯಲ್ಲಿ ಒಟ್ಟು 26 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿ, ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು
2003 ಕಾಯ್ದೆ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೋಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಲಾಯಿತು.
ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಸಮಾಜ ಕಾರ್ಯಕರ್ತೆಯಾದ ಕವಿತಾ ರಾಜನ್ನವರ, ಪೆÇಲೀಸ್ ಇಲಾಖೆಯ ಉಮೇಶ ಪಡೆನಾವರ, ಆರೋಗ್ಯ ನೀರಿಕ್ಷಕರಾದ ಮಂಜುನಾಥ ಬೆರಕಿನಾಳ, ರಮೇಶ ಹುಲಿಕೇರಿ ದಾಳಿಯಲ್ಲಿ ಪಾಲಗ್ಗೋಂಡಿದ್ದರು.///
ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ
ಬೆಳಗಾವಿ, ಆ.03 : ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ” ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ” ಗೃಹ ಜ್ಯೋತಿ” ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವು ಆಗಸ್ಟ್.5 2023 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಲಿದೆ.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ವಿಧಾನಸಭೆ ಶಾಸಕರಾದ ಆಸಿಫ್ ಸೆಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಬಿ. ಶೆಟ್ಟೆಣ್ಣವರ, ಆರಕ್ಷಕ ಮಹಾನಿರಿಕ್ಷಕರಾದ ವಿಕಾಸ ಕುಮಾರ ವಿಕಾಸ, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್, ಪೆÇಲೀಸ್ ಆಯುಕ್ತರಾದ ಎಸ್. ಏನ್ ಸಿದ್ದರಾಮಪ್ಪ, ಜಿಲ್ಲಾ ಪೆÇಲೀಸ್ ವರಿಷ್ಠಧಿಕಾರಿಗಳಾದ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಆಗಮಿಸಲಿದ್ದಾರೆ.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಕ. ವಿ.ನಿ. ನಿ ಹಾಗೂ ಕ. ವಿ. ಪ್ರ. ನಿ. ನಿ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ರೋಷನ್, ಹೆಸ್ಕಾಂ ನಿರ್ದೇಶಕರಾದ ಶ್ರೀಕಾಂತ್ ಎಂ ಸಸಾಲಟ್ಟಿ, ಪಾಟೀಲ್ ಪ್ರಕಾಶ, ಮುಖ್ಯ ಇಂಜಿನಿಯರ ವಿ. ಪ್ರಕಾಶ್, ಅಧೀಕ್ಷಕ ಇಂಜಿನಿಯರ ಪ್ರವೀಣಕುಮಾರ್ ಚಿಕಡೆ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.///
ವಿವಿಧ ಬೆಳೆಗಳ ವಿಮೆ ಪಾವತಿಗೆ ಅವಧಿ ವಿಸ್ತರಣೆ
ಬೆಳಗಾವಿ, ಆ.03 : ಮುಂಗಾರು-2023 ನೇ ಹಂಗಾಮಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ದಾಳಿಂಬೆ, ಮಾವು ಹಾಗೂ ಹಸಿಮೆಣಸಿನಕಾಯಿ ಬೆಳೆಗಳಿಗೆ ಅಧಿಸೂಚಿತ ಘಟಕದ ರೈತರ ವಿಮೆ ಪಾವತಿಗಾಗಿ ಅಗಸ್ಟ್.07 2023 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೋಬಳಿ/ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///