ರಾಹುಲ್ ಗಾಂಧಿಗೆ ಸುಪ್ರಿಂ ಕೋರ್ಟ್ ರಿಲೀಫ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತ

ಬೆಂಗಳೂರು: ಮೋದಿ ಉಪನಾಮ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವಾಗಿದೆ. ದ್ವೇಷದ ರಾಜಕಾರಣ ಸರಿಯಲ್ಲ ಎಂದು ತೋರಿಸಿಕೋಟ್ಟಿದೆ. ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಪ್ರಯತ್ನವನ್ನು ಯಾರೂ ಮಾಡಬಾರದು. ಕೂಡಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಮರಳಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.