ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ : ಪ್ರಕಟಣೆ

ಬೆಳಗಾವಿ, ಆ.05 : ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಮತ್ತು ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಜೂನ್.14 2023 ರಂದು ಜರುಗಿದ ಸಭೆಯ ನಡಾವಳಿಯ ಮೇರೆಗೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ಅನ್ನು ರಿಯಾಯಿತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, ಕರ್ನಾಟಕ ಸರ್ಕಾರವು ಆದೇಶವನ್ನು ಹೊರಡಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ : 45 ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
ಬೆಳಗಾವಿ, ಆ.05 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿಯನ್ನು ನಿಡಲಾಗುವುದು.
ಆಗಸ್ಷ್. 14 2023 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ : ಅರ್ಜಿ ಆಹ್ವಾನ
ಬೆಳಗಾವಿ, ಆ.05 : ಬೆಳಗಾವಿ ಜಿಲ್ಲೆಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2023-24ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ,ಗಿರಿಜನ ಉಪಯೋಜನೆ ಅಡಿಯಲ್ಲಿ 6+1 ಕುರಿ,ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಗೆ ಪರಿಶಿಷ್ಟ ಜಾತಿಯ 6 ಹಾಗೂ ಪರಿಶಿಷ್ಟ ಪಂಗಡದ 2 ಒಟ್ಟು 8 ಗುರಿಗಳನ್ನು ನಿಗದಿಪಡಿಸಲಾಗಿದ್ದು, ಕಳೆದ ಮೂರು ವರ್ಷದ ಅವಧಿಯಲ್ಲಿ ಈ ಸೌಲಭ್ಯವನ್ನು ಪಡೆಯದ ಸಂಘದ ಸದಸ್ಯರುಗಳಿಗೆ ಆದ್ಯತೆ ನೀಡಲಾಗುವದು.
ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ ಎಸ್.ಸಿ ಎಸ್.ಟಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಫಲಾನುಭವಿಗಳು ಸದರಿ ಅರ್ಜಿಯನ್ನ ಆ.05 2022 ರಿಂದ ಈ ಕಛೇರಿಯಿಂದ ತಾಲೂಕಾ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ,ಪಶು ಆಸ್ಪತ್ರೆಗಳಲ್ಲಿ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಪಡೆಯಬಹುದಾಗಿದೆ.
ಮರಳಿ ಕಛೇರಿಗೆ ಆ.19 2023 ರ ಒಳಗಾಗಿ ಖುದ್ದಾಗಿ ಎರಡು ಪ್ರತಿಯಲ್ಲಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರ ಪಡೆಯಲು ದೂರವಾಣಿ ಸಂಖ್ಯೆ:0831-2431294 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆಅಭಿವೃದ್ಧಿ ನಿಗಮ ನಿಯಮಿತ ಬೆಳಗಾವಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ವಿಕಲಚೇತನ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ: ರಾಷ್ಟ್ರ ಪ್ರಶಸ್ತಿಗಾಗಿ ಆನ್‍ಲೈನ್ ಅರ್ಜಿ ವಿಸ್ತರಣೆ
ಬೆಳಗಾವಿ, ಆ.05 : ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023 ನೇ ಸಾಲಿನ ಮೂಲಕ ಅರ್ಜಿ ಸಲ್ಲಿಸಲು ಜೂ.31 ಕೊನೆಯ ದಿನಾಂಕವಾಗಿತ್ತು.ಕಾರಣತಗಳಿಂದ ಸದರಿ ದಿನಾಂಕವನ್ನು ವಿಸ್ತರಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳು ಆ.1 ರಿಂದ ಆ.15 2023 ರ ಒಳಗಾಗಿ ಅರ್ಜಿ ಸಲ್ಲಿಸಹುದಾಗಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳು ಆನ್‍ಲೈನ್ ವೆಬ್‍ಸೈಟ್ www.disabilityaffairs.gov.in ಅಥವಾ www.awards.gov.in ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ವೆಬ್‍ಸೈಟ್ ತಿತಿತಿ.ಚಿತಿಚಿಡಿಜs.gov.iಟಿ ಗೆ ಅಥವಾ ಕಛೇರಿಯ ದೂರವಾಣಿ ಸಂಖ್ಯೆ 0831-2476096 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ///